ADVERTISEMENT

ತಮಿಳುನಾಡು ರಾಜ್ಯಪಾಲರಾಗಿ ಶಂಕರಮೂರ್ತಿ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2016, 19:30 IST
Last Updated 10 ಆಗಸ್ಟ್ 2016, 19:30 IST
ಡಿ.ಎಚ್‌.ಶಂಕರಮೂರ್ತಿ
ಡಿ.ಎಚ್‌.ಶಂಕರಮೂರ್ತಿ   

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರು ತಮಿಳುನಾಡು ರಾಜ್ಯಪಾಲರಾಗಿ ನೇಮಕವಾಗುವುದು ಬಹುತೇಕ ಖಚಿತವಾಗಿದೆ.

ಜನ ಸಂಘದ ಕಾಲದಿಂದಲೂ ಪಕ್ಷ ಸಂಘಟನೆಗಾಗಿ ಶ್ರಮಿಸಿರುವ 76 ವರ್ಷದ ಶಂಕರಮೂರ್ತಿ ಅವರನ್ನು ದಕ್ಷಿಣ ಭಾರತದ ಯಾವುದಾರೂ ರಾಜ್ಯಕ್ಕೆ ರಾಜ್ಯಪಾಲರಾಗಿ ನೇಮಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠರು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರ ಮೇಲೆ ಒತ್ತಡ ಹಾಕಿದ್ದರು.

ಹಾಗಾಗಿ, ಒಂದು ವಾರದ ಹಿಂದೆಯೇ ಅಮಿತ್‌ ಷಾ ಅವರು ಶಂಕರಮೂರ್ತಿ ಅವರನ್ನು ಕರೆದು ಹೊಸ ಜವಾಬ್ದಾರಿ ನಿಭಾಯಿಸಲು ಸಿದ್ಧರಾಗಿರುವಂತೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.