ADVERTISEMENT

ತಿಪಟೂರು ಬಳಿ ಅಪಘಾತ: ಐದು ಜನರ ದುರ್ಮರಣ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2011, 19:30 IST
Last Updated 2 ಸೆಪ್ಟೆಂಬರ್ 2011, 19:30 IST

ತಿಪಟೂರು:  ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಬೆಂಗಳೂರಿನ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಕೋಣನಕಾವಲು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಗುರುವಾರ ಸಂಭವಿಸಿದೆ.

ಬೆಂಗಳೂರು ವಿಲ್ಸನ್ ಗಾರ್ಡನ್ ನಿವಾಸಿಗಳಾದ ಉಪೇಂದ್ರ (68), ಸಹೋದರಿಯರಾದ ಸುಭದ್ರ (55), ರುಕ್ಮಿಣಿ (45), ಸಂಬಂಧಿ ಶ್ರಿನಿವಾಸ (68) ಹಾಗೂ ಚಾಲಕ ಚಂದ್ರ (40) ಮೃತಪಟ್ಟವರು. ಇವರು ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.