ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಕುರಿತು ಚರ್ಚಿಸಲು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಹೊರಬಿದ್ದಿಲ್ಲ. ಸಮಿತಿ ಇದೇ 30ಕ್ಕೆ ಮತ್ತೊಮ್ಮೆ ಸಭೆ ಸೇರಲಿದೆ.
ಸುಮಾರು ಎರಡು ಗಂಟೆ ಕಾಲ ನಡೆದ ಸಭೆಯಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಗೃಹ ಸಚಿವ ಆರ್.ಅಶೋಕ, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್ ಮತ್ತಿತರರು ಭಾಗವಹಿಸಿದ್ದರು.
ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನಕ್ಕೆ ಬಂದಿರುವ ಅರ್ಜಿಗಳನ್ನು ಸಮಿತಿ ಪರಿಶೀಲಿಸಿತು. ಆದರೆ, ಯಾವ ಹೆಸರನ್ನೂ ಅಂತಿಮಗೊಳಿಸಲು ಸಾಧ್ಯವಾಗಲಿಲ್ಲ ಎಂದು ಸಿದ್ದರಾಮಯ್ಯ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಹೆಚ್ಚಿನ ಮಾಹಿತಿ ಬೇಕಿರುವ ಕಾರಣ ಸಭೆಯನ್ನು 30ಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.