ADVERTISEMENT

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ಯುವಕರು

​ಪ್ರಜಾವಾಣಿ ವಾರ್ತೆ
Published 23 ಮೇ 2018, 10:41 IST
Last Updated 23 ಮೇ 2018, 10:41 IST
ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ಯುವಕರು
ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ಯುವಕರು   

ಹೊಸಪೇಟೆ: ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಬುಧವಾರ ಬೆಳಿಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಪೆದ್ದಟೂರು ಗ್ರಾಮದ ವಿನಯ (19) ಹಾಗೂ ನವೀನ್‌ (18) ಮೃತಪಟ್ಟವರು.

‘ಗ್ರಾಮದಿಂದ ಸುಮಾರು 40ಕ್ಕೂ ಹೆಚ್ಚು ಜನ ಹಂಪಿಗೆ ಬಂದಿದ್ದರು. ಸ್ಥಳೀಯರು ನೀಡಿದ ಎಚ್ಚರಿಕೆಯನ್ನು ಗಮನಿಸದೆ ಸ್ನಾನಘಟ್ಟದಿಂದ ತುಂಗಭದ್ರಾ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ನುರಿತ ಈಜುಗಾರರು ಶವಗಳ ಶೋಧ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.