ತುಮಕೂರು: ತುಮಕೂರಿಗೆ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿ ಸಾರ್ವಜನಿಕರಿಗೆ ಸಾಕಷ್ಟು ಕಿರಿಕಿರಿಯಾಗಿದೆ.
ನಗರದ ಬಿ.ಎಚ್ ರಸ್ತೆ ಸಂಪರ್ಕಿಸುವ ಒಳ ರಸ್ತೆಗಳಲ್ಲೂ ಪೊಲೀಸರು ವಾಹನ ಸಂಚಾರ ಬಂದ್ ಮಾಡಿದ್ದು, ಇದು ಅಘೊಷಿತ ಕರ್ಫ್ಯೂ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೆಲ ಕಡೆ ಅಂಗಡಿ–ಮಳಿಗೆಗಳನ್ನು ಪೊಲೀಸರು ಬಲವಂತವಾಗಿ ಮುಚ್ಚಿಸಿದ್ದಾರೆ.
ಸಿದ್ಧಗಂಗಾಮಠದಿಂದ ಟೌನ್ ಹಾಲ್ ಸಂಪರ್ಕಿಸುವ ಬಿ.ಎಚ್ ರಸ್ತೆಯಲ್ಲಿ 2:30ರಿಂದ ಸಂಪೂರ್ಣ ಜಿರೊ ಟ್ರಾಫಿಕ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.