ADVERTISEMENT

ತುಮಕೂರು ಮಹಾನಗರ ಪಾಲಿಕೆ: ನೂತನ ಮೇಯರ್ ಆಗಿ ಸುಧೀಶ್ವರ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 8:50 IST
Last Updated 24 ಮಾರ್ಚ್ 2018, 8:50 IST
ಸುಧೀಶ್ವರ್ ಮತ್ತು ಜಯಲಕ್ಷ್ಮಿ ವೆಂಕಟೇಶ್ ಗೌಡ
ಸುಧೀಶ್ವರ್ ಮತ್ತು ಜಯಲಕ್ಷ್ಮಿ ವೆಂಕಟೇಶ್ ಗೌಡ   

ತುಮಕೂರು: ತುಮಕೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್‌ನ ಸುಧೀಶ್ವರ್, ಉಪಮೇಯರ್ ಆಗಿ ಜೆಡಿಎಸ್‌ನ ಜಯಲಕ್ಷ್ಮಿ ವೆಂಕಟೇಶ್ ಗೌಡ ಆಯ್ಕೆಯಾದರು.

ಮೇಯರ್, ಉಪಮೇಯರ್ ಹುದ್ದೆಗೆ ಶನಿವಾರ ನಡೆದ ಚುನಾವಣೆಯಲ್ಲಿ ಈ ಬಾರಿ ಮೇಯರ್ ಸ್ಥಾನ ಕಾಂಗ್ರೆಸ್ ಮತ್ತು ಉಪಮೇಯರ್ ಸ್ಥಾನ ಜೆಡಿಎಸ್ ಪಡೆಯುವ ಮೂಲಕ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಹೊಂದಾಣಿಕೆ ಮುಂದುವರಿಯಿತು.

ಮೇಯರ್ ಸ್ಥಾನ ಪರಿಶಿಷ್ಟ ಜಾತಿ(ಎಸ್ಸಿ), ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಒಟ್ಟು 35 ಸದಸ್ಯ ಬಲದ ಪಾಲಿಕೆಯಲ್ಲಿ ಯಾವು ಪಕ್ಷವೂ ಬಹುಮತ ಹೊಂದಿಲ್ಲ. 

ADVERTISEMENT

ಕಾಂಗ್ರೆಸ್, ಜೆಡಿಎಸ್ ,ಬಿಜೆಪಿ ಮೂರು ಪಕ್ಷಗಳು ಹೊಂದಾಣಿಕೆಯ ಮೇಲೆ ಕಳೆದ ನಾಲ್ಕು ವರ್ಷಗಳಿಂದ ಆಡಳಿತ ನಡೆಸಿಕೊಂಡು ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.