ADVERTISEMENT

ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಜೈಲಿಗೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2011, 19:30 IST
Last Updated 6 ಜೂನ್ 2011, 19:30 IST

ತುರುವೇಕೆರೆ: ಪ್ರತಿಭಟನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಸಕ ಎಂ.ಟಿ.ಕೃಷ್ಣಪ್ಪ, ಇತರೆ 11 ಮಂದಿಯನ್ನು ಸೋಮವಾರ ಜೈಲಿಗೆ ಕಳುಹಿಸಲಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಶಾಸಕರು ತಮ್ಮ ಬೆಂಬಲಿಗರೊಂದಿಗೆ ನೂತನ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ನಾಲ್ಕು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು.

ಸರ್ಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿ ಉಂಟು ಮಾಡಿದ ಆರೋಪದ ಮೇಲೆ ಶಾಸಕರೂ ಸೇರಿದಂತೆ ಸುಮಾರು 120 ಜನರ ವಿರುದ್ಧ ಪ್ರತ್ಯೇಕವಾಗಿ 5 ಪ್ರಕರಣ ದಾಖಲಿಸಲಾಗಿತ್ತು. ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಸೋಮವಾರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಚ್.ಆರ್.ಬನ್ನಿಕಟ್ಟಿ ವಿಚಾರಣೆ ನಡೆಸಿದರು. ಕೋರ್ಟಿಗೆ ಹಾಜರಾದ ಶಾಸಕ ಎಂ.ಟಿ.ಕೃಷ್ಣಪ್ಪ, ತಾವು ಜಾಮೀನು ಪಡೆಯುವುದಿಲ್ಲ ಎಂದರು. ನಂತರ ಜೂನ್ 18ರ ವರೆಗೆ ಶಾಸಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.