
ಬಾಗಲಕೋಟೆ: ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವ ಇದೇ 27ರಂದು ಮುಂಜಾನೆ 11.30ಕ್ಕೆ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಕುಲಪತಿ ಡಾ.ಡಿ.ಎಲ್. ಮಹೇಶ್ವರ್ ಹೇಳಿದರು.
ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ.ಅಶೋಕ ದಳವಾಯಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕೃಷಿ ಮತ್ತು ಮಾರುಕಟ್ಟೆ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಘಟಿಕೋತ್ಸವದಲ್ಲಿ 336 ಸ್ನಾತಕ ವಿದ್ಯಾರ್ಥಿಗಳು ಮತ್ತು 87 ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪದವಿ ಪಡೆದುಕೊಂಡಿರುವ 16 ವಿದ್ಯಾರ್ಥಿಗಳಿಗೆ ಪದವಿ ಸೇರಿದಂತೆ ಒಟ್ಟು 437 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಒಟ್ಟು 57 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.