
ಪ್ರಜಾವಾಣಿ ವಾರ್ತೆಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಬಳ್ಪ ಗ್ರಾಮದ ಕಾರಿಜ ಎಂಬಲ್ಲಿ ಶುಕ್ರವಾರ ಪತಿಯು ವಿಷ ಸೇವಿಸಿ ಹಾಗೂ ಪತ್ನಿಯು ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿಪ್ರಕಾಶ್ (44) ಮೊದಲಿಗೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು. ಇದನ್ನು ನೋಡಿದ ಪತ್ನಿ ನಾಗವೇಣಿ (38) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರು. ಸಾವಿಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಾಗವೇಣಿ ರವಿಕುಮಾರ್ ಅವರ ಎರಡನೇ ಪತ್ನಿ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.