ADVERTISEMENT

ದಕ್ಷಿಣ ಕನ್ನಡ: ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಗೆಲುವು ಖಚಿತ

​ಪ್ರಜಾವಾಣಿ ವಾರ್ತೆ
Published 16 ಮೇ 2014, 5:07 IST
Last Updated 16 ಮೇ 2014, 5:07 IST
ದಕ್ಷಿಣ ಕನ್ನಡ: ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಗೆಲುವು ಖಚಿತ
ದಕ್ಷಿಣ ಕನ್ನಡ: ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಗೆಲುವು ಖಚಿತ   

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ನಳೀನ್‌ ಕುಮಾರ್‌ ಕಟೀಲ್‌ ಅವರು ಗೆಲುವು ಸಾಧಿಸುವುದು ಖಚಿತವಾಗಿದೆ.

15 ಸುತ್ತುಗಳ ಮತ ಎಣಿಕೆ ನಡೆದಿದ್ದು 5 ಲಕ್ಷ 45 ಸಾವಿರಕ್ಕೂ ಅಧಿಕ ಮತಗಳನ್ನು ಗಳಿಸಿರುವ ನಳಿನ್‌ ಕುಮಾರ್‌ ಕಟೀಲ್‌, ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರಿಗಿಂತ ಸುಮಾರು 1.35 ಲಕ್ಷ ಮತಗಳಿಗಿಂತ ಮುನ್ನಡೆ ಸಾಧಿಸಿದ್ದಾರೆ. ಆರಂಭದ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿರುವ ನಳಿನ್‌ ಕುಮಾರ್‌ ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.

ಇನ್ನು ಮೂರು ಸುತ್ತುಗಳ ಮತ ಎಣಿಕೆ ಕಾರ್ಯ ಮಾತ್ರ ಬಾಕಿ ಉಳಿದಿದ್ದು, ಬಿಜೆಪಿ ಅಭ್ಯರ್ಥಿಯ ಗೆಲುವು ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT