ADVERTISEMENT

ದತ್ತಾಂಶ ಹಂಚಿಕೆ: ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2018, 19:30 IST
Last Updated 24 ಫೆಬ್ರುವರಿ 2018, 19:30 IST

ಬೆಂಗಳೂರು: ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲೀಕರಿಸಿ, ಶಿಕ್ಷಕರ ಜ್ಞಾನವನ್ನು ಹಂಚುವ ಉದ್ದೇಶದಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ‘ಸ್ಕೂಗ್‌ ಲಿಂಕ್‌ ಪ್ರೈವೆಟ್‌ ಲಿಮಿಟೆಡ್‌’ ಜತೆ ಮಾಡಿಕೊಂಡಿದ್ದ ಒಪ್ಪಂದದ ಬಗ್ಗೆ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯ ಅರುಣ ಶಹಾಪೂರ ಒತ್ತಾಯಿಸಿದ್ದಾರೆ.

ಇದರಿಂದ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ವೈಯಕ್ತಿಕ ಮಾಹಿತಿ ಸೋರಿಕೆಯಾಗಬಹುದು ಎಂಬ ಆತಂಕ ವ್ಯಕ್ತವಾದ ಬಳಿಕ ಒಡಂಬಡಿಕೆ ರದ್ದುಪಡಿಸಲಾಗಿದೆ. ಈ ಪ್ರಕರಣದಿಂದಾಗಿ ಶಿಕ್ಷಣ ಇಲಾಖೆ ಸಚಿವಾಲಯದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ ಎಂದಿದ್ದಾರೆ.

ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ತಪ್ಪು ಮಾಡಿದವರನ್ನು ಪತ್ತೆ ಹಚ್ಚಿ ಶಿಸ್ತು ಕ್ರಮ ಜರುಗಿಸಬೇಕು ಎಂದು ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.