ADVERTISEMENT

ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2012, 19:30 IST
Last Updated 17 ಜೂನ್ 2012, 19:30 IST

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿಶೇಷ ವರ್ಗದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪ್ರಕ್ರಿಯೆ ಸೋಮವಾರದಿಂದ ಆರಂಭವಾಗಲಿದೆ.

ಅಂಗವಿಕಲ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಸೋಮವಾರ ನಡೆಯಲಿದೆ. ಮಂಗಳವಾರ ಎನ್‌ಸಿಸಿ ಮತ್ತು ಬುಧವಾರ ಕ್ರೀಡಾ ಕೋಟಾದಡಿ ಪ್ರವೇಶ ಬಯಸಿರುವವರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.
 
ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮೂರೂ ದಿನಗಳ ಕಾಲ ಬೆಳಿಗ್ಗೆ 11ರಿಂದ ದಾಖಲೆಗಳ ಪರಿಶೀಲನೆ ನಡೆಯುತ್ತದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.