ADVERTISEMENT

ದಾವಣಗೆರೆ: 12ರಿಂದ ಗೀತೋತ್ಸವ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ಬೆಂಗಳೂರು: ರಾಜ್ಯಮಟ್ಟದ ಒಂಬತ್ತನೆಯ ಸುಗಮ ಸಂಗೀತ ಸಮ್ಮೇಳನ    `ಗೀತೋತ್ಸವ~ ಇದೇ 12 ಮತ್ತು 13ರಂದು ದಾವಣಗೆರೆಯಲ್ಲಿ ನಡೆಯಲಿದ್ದು, ವಿದುಷಿ ಶ್ಯಾಮಲಾ ಜಿ. ಭಾವೆ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಾಹಿತಿ ಚನ್ನವೀರ ಕಣವಿ ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಎರಡು ದಿನಗಳ ಸಮ್ಮೇಳನದಲ್ಲಿ ಅಧ್ಯಕ್ಷರ ಮೆರವಣಿಗೆ, ಕವಿತಾ ವಾಚನ, ಜಾನಪದ ಝೇಂಕಾರ, ಗೀತ ನೃತ್ಯ, ಸಮೂಹ ಗಾಯನ, ಚಿಣ್ಣರಿಂದ ಸುಗಮ ಸಂಗೀತ ಗಾಯನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ರಾಜ್ಯ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಸುಗಮ ಸಂಗೀತದ ಇತಿ-ಮಿತಿಗಳು ಮತ್ತು ಹೊಸ ಸಾಧ್ಯತೆಗಳ ಕುರಿತು 13ರಂದು ವಿಚಾರ ಗೋಷ್ಠಿ ನಡೆಯಲಿದೆ. ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದು, ಗಾಯಕರಾದ ರತ್ನಮಾಲಾ ಪ್ರಕಾಶ್, ನರಸಿಂಹ ನಾಯಕ್, ಎನ್.ಎಸ್. ಪ್ರಸಾದ್ ಮತ್ತು ಅರ್ಚನಾ ಉಡುಪ ಅವರು ಪಾಲ್ಗೊಳ್ಳಲಿದ್ದಾರೆ.

ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರು ಸಮಾರೋಪ ಭಾಷಣ ಮಾಡಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.