ಬೆಂಗಳೂರು: ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಈ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಬೇಕು. ಆದರೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳ ನಡುವೆ ವ್ಯತ್ಯಾಸವಿದೆ. ಆದ್ದರಿಂದ, ಈ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದರು.
ಈ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಅಲೆ ಯಾವುದೇ ರೀತಿ ಕೆಲಸ ಮಾಡಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.