ADVERTISEMENT

ದಿನೇಶ್ ಅಮಿನ್ ಮಟ್ಟು ಅವರಿಗೆ ಪಾಂಡೇಶ್ವರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2012, 19:30 IST
Last Updated 19 ಏಪ್ರಿಲ್ 2012, 19:30 IST

ಧಾರವಾಡ: ಅವನಿ ರಸಿಕರ ರಂಗ ವೇದಿಕೆ ಹಾಗೂ ಗಣಪತ್ ರಾವ್‌ಪಾಂಡೇಶ್ವರ ಪ್ರತಿಷ್ಠಾನ ನೀಡುವ ಜಿ.ಆರ್.ಪಾಂಡೇಶ್ವರ ಪ್ರಶಸ್ತಿಗೆ `ಪ್ರಜಾವಾಣಿ~ ಪತ್ರಿಕೆಯ ಸಹಾಯಕ ಸಂಪಾದಕ ದಿನೇಶ್ ಅಮಿನ್ ಮಟ್ಟು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5000 ರೂಪಾಯಿ ನಗದು, ಫಲಕ ಒಳಗೊಂಡಿದೆ.

2010 ನೇ ಸಾಲಿನ ಪ್ರಶಸ್ತಿಗೆ ದಿನೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 23 ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಭಾಭವನದಲ್ಲಿ ನಡೆಯಲಿದೆ. ಪ್ರೊ. ಎಂ.ಗಂಗಾಧರಪ್ಪ ಅಧ್ಯಕ್ಷತೆ ವಹಿಸುವರು. ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ ಪ್ರದಾನ ಮಾಡುವರು ಎಂದು ಅವನಿ ರಸಿಕರ ರಂಗ ವೇದಿಕೆಯ ಕಾರ್ಯಾಧ್ಯಕ್ಷ ಎನ್.ಪಿ.ಭಟ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.