ADVERTISEMENT

ದೀಪೋತ್ಸವ– ರಥೋತ್ಸವ ಕಣ್ತುಂಬಿಕೊಂಡ ಭಕ್ತರು

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2017, 19:30 IST
Last Updated 1 ನವೆಂಬರ್ 2017, 19:30 IST
ಲಕ್ಷ ದೀಪೋತ್ಸವದ ಅಂಗವಾಗಿ ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಕೃಷ್ಣ ಮಠದ ರಥಬೀದಿಯಲ್ಲಿ ಬುಧವಾರ ಸಾಲು ದೀಪ ಜೋಡಿಸಿದರು.
ಲಕ್ಷ ದೀಪೋತ್ಸವದ ಅಂಗವಾಗಿ ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಕೃಷ್ಣ ಮಠದ ರಥಬೀದಿಯಲ್ಲಿ ಬುಧವಾರ ಸಾಲು ದೀಪ ಜೋಡಿಸಿದರು.   

ಉಡುಪಿ: ಉತ್ಥಾನ ದ್ವಾದಶಿ ಪ್ರಯುಕ್ತ ಉಡುಪಿ ರಥಬೀದಿಯಲ್ಲಿ ಬುಧವಾರ ರಾತ್ರಿ ನಡೆದ ರಥೋತ್ಸವವನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು. ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವದಲ್ಲಿಯೂ ಭಾರಿ ಸಂಖ್ಯೆಯಲ್ಲಿ ಜನರು ಪಾಲ್ಗೊಂಡರು.

ಬೆಳಿಗ್ಗೆಯಿಂದಲೇ ಶ್ರೀಕೃಷ್ಣ ಮಠದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭವಾದವು. ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಕಿರಿಯ ವಿಶ್ವಪ್ರಸನ್ನ ಸ್ವಾಮೀಜಿ ಅವರು ದೇವರಿಗೆ ತುಳಸಿ ಪೂಜೆ ಮಾಡಿದರು. ಮಧ್ವಸರೋವರದ ಮಂಟಪದಲ್ಲಿ ಸಂಜೆ ಕ್ಷೀರಾಬ್ಧಿ ಪೂಜೆಯನ್ನೂ ನೆರವೇರಿಸಿದರು.

ರಥಬೀದಿಯ ಸುತ್ತಲೂ ಖುದ್ದು ಪೇಜಾವರ ಸ್ವಾಮೀಜಿ, ವಿಶ್ವಪ್ರಸನ್ನ ಸ್ವಾಮೀಜಿ ಮತ್ತು ಕಾಣಿಯೂರು ಮಠದ ವಿದ್ಯಾವಲ್ಲಭ ಸ್ವಾಮೀಜಿ ಅವರು ಸಾಲು ದೀಪಗಳನ್ನು ಜೋಡಿಸಿ ಲಕ್ಷ ದೀಪೋತ್ಸವಕ್ಕೆ ಸಿದ್ಧತೆ ಮಾಡಿದರು. ಭಕ್ತರೂ ಇದಕ್ಕೆ ಕೈಜೋಡಿಸಿದರು. ಆ ನಂತರ ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು. ಇದೇ 4ರ ವರೆಗೆ ಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.