ADVERTISEMENT

ದುಬೈ: ರಾಜ್ಯದ ವಿದ್ಯಾರ್ಥಿನಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಮೇ 2018, 21:13 IST
Last Updated 4 ಮೇ 2018, 21:13 IST
ದುಬೈ: ರಾಜ್ಯದ ವಿದ್ಯಾರ್ಥಿನಿಗೆ ಪ್ರಶಸ್ತಿ
ದುಬೈ: ರಾಜ್ಯದ ವಿದ್ಯಾರ್ಥಿನಿಗೆ ಪ್ರಶಸ್ತಿ   

ಮಂಗಳೂರು: ಯುಎಇ ಸರ್ಕಾರ ಪ್ರತಿ ವರ್ಷ ಅತ್ಯಂತ ಪ್ರತಿಭಾವಂತ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ಹಂದಾನ್‌ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಕರ್ನಾಟಕ ಮೂಲದ 8ನೇ ತರಗತಿ ವಿದ್ಯಾರ್ಥಿನಿ ವಿಭಾಲಿ ಶೆಟ್ಟಿ ಆಯ್ಕೆಯಾಗಿದ್ದಾರೆ.

ಈಚೆಗೆ ದುಬೈ ವರ್ಲ್ಡ್‌ ಟ್ರೇಡ್‌ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಅಲ್ಲಿನ ಹಣಕಾಸು ಸಚಿವ ಶೇಖ್‌ ಹಂದಾನ್‌ ಬಿನ್‌ ರಶೀದ್ ಅಲ್ ಮಕ್ತಮ್‌ ಪ್ರಶಸ್ತಿ ಪ್ರದಾನ ಮಾಡಿದರು.

ದುಬೈಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 25 ಲಕ್ಷ ವಿದ್ಯಾರ್ಥಿಗಳ ಪೈಕಿ ವಿಭಾಲಿ ಶೆಟ್ಟಿ ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ರಿಜಬ್‌ ಟ್ರೇಡಿಂಗ್ ಕಂಪನಿಯ ವ್ಯವಸ್ಥಾಪಕ ಪಾಲುದಾರ ಪ್ರಸಾದ್‌ ಶೆಟ್ಟಿ ಮತ್ತು ಹಿರಿಯ ವಾಸ್ತು ವಿನ್ಯಾಸಕಿ ಸುರಕ್ಷಾ ಪ್ರಸಾದ್‌ ಶೆಟ್ಟಿ ಅವರ ಪುತ್ರಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.