ADVERTISEMENT

ದೇವರಹಿಪ್ಪರಗಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 6:26 IST
Last Updated 21 ಮಾರ್ಚ್ 2018, 6:26 IST
ದೇವರಹಿಪ್ಪರಗಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಬಿಜೆಪಿ ಸೇರ್ಪಡೆ
ದೇವರಹಿಪ್ಪರಗಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಬಿಜೆಪಿ ಸೇರ್ಪಡೆ   

ಬೆಂಗಳೂರು: ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು‌.

ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಮತ್ತು ಪಾವಗಡದ ಜಿ.ಪಂ.ಸದಸ್ಯ(ಮಾಜಿ ಮಂತ್ರಿ ವೆಂಕಟರಮಣಪ್ಪ ಪುತ್ರ) ಕುಮಾರಸ್ವಾಮಿ ಇದೇ ವೇಳೆ ಬಿಜೆಪಿಗೆ ಸೇರ್ಪಡೆಯಾದರು.

ADVERTISEMENT

ಶಾಸಕ ನಡಹಳ್ಳಿ ಅವರು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು. ನಂತರ ಜೆಡಿಎಸ್‌ ಪಕ್ಷದ ಜತೆ ಗುರುತಿಸಿಕೊಂಡಿದ್ದ ಅವರು ಇದೀಗ ಬಿಜೆಪಿಗೆ ಸೆರ್ಪಡೆಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.