ADVERTISEMENT

‘ದ್ರಾಕ್ಷಿ ಬೆಳೆಗಾರರ ಸಾಲಮನ್ನಾಕ್ಕೆ ಕೇಂದ್ರಕ್ಕೆ ಶಿಫಾರಸು’

ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2018, 19:30 IST
Last Updated 10 ಜೂನ್ 2018, 19:30 IST

ವಿಜಯಪುರ: ದ್ರಾಕ್ಷಿ ಬೆಳೆಗಾರರ ಸಾಲಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಹೇಳಿದರು.

ಅಡಿಕೆ ಬೆಳೆಗಾರರಿಗೆ ದೊರಕುವ ಸೌಲಭ್ಯಗಳ ಮಾದರಿಯಲ್ಲಿಯೇ ದ್ರಾಕ್ಷಿ ಬೆಳೆಗಾರರಿಗೂ ವಿಶೇಷ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾ
ಣಿಕವಾಗಿ ಶ್ರಮಿಸುವುದಾಗಿ ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಲಿಂಬೆ ಅಭಿವೃದ್ಧಿ ಮಂಡಳಿಗೆ ಉತ್ತೇಜನ ನೀಡಲಾಗುವುದು. ಹೆಚ್ಚಿನ ಹಣಕಾಸು ಸೌಲಭ್ಯ ಒದಗಿಸಿ ಲಿಂಬೆ ಬೆಳೆಗಾರರ ಸಂಕಷ್ಟ ನಿವಾರಿಸಲಾಗುವುದು. ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು, ಇಂಡಿ ತಾಲ್ಲೂಕು ತಿಡಗುಂದಿ ಬಳಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸುವ ಆಲೋಚನೆ ಇದೆ’ ಎಂದು ಅವರು ತಿಳಿಸಿದರು.

ADVERTISEMENT

‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಸ್ರೇಲ್‌ಗೆ ಭೇಟಿ ನೀಡಿ ಅಲ್ಲಿನ ಕೃಷಿ ಬಗ್ಗೆ ಮಾಹಿತಿ ಪಡೆದು ಬಂದಿದ್ದಾರೆ. ಅದನ್ನೂ ರಾಜ್ಯದಲ್ಲಿಯೂ ಅಳವಡಿಸಿಕೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.