ADVERTISEMENT

ದ್ವಿತೀಯ ಪಿಯು– ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 19:30 IST
Last Updated 26 ಅಕ್ಟೋಬರ್ 2017, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು 2018ರ ಮಾರ್ಚ್‌ 1ರಿಂದ 16ರವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 23ರಿಂದ ಏಪ್ರಿಲ್‌ 4ರವರೆಗೆ ನಿಗದಿಪಡಿಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.

ವಿಧಾನಸಭಾ ಚುನಾವಣೆ ಕಾರಣದಿಂದಾಗಿ ಎರಡೂ ಪರೀಕ್ಷೆಗಳು ಸುಮಾರು ಒಂದು ವಾರ ಮುಂಚಿತವಾಗಿ ಆರಂಭವಾಗುತ್ತಿವೆ. ದ್ವಿತೀಯ ಪಿಯು ಪರೀಕ್ಷೆ ಕಳೆದ ಮಾರ್ಚ್‌ 9ರಿಂದ 27ರವರೆಗೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 30ರಿಂದ ಏಪ್ರಿಲ್ 12ರವರೆಗೆ ನಡೆದಿತ್ತು.

ವೇಳಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್‌ 24ರೊಳಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ADVERTISEMENT

ಪಿಯು ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ: ಜಂಟಿ ನಿರ್ದೇಶಕರು (ಪರೀಕ್ಷೆ), ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು– 560012

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ: ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 6ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು– 560003

––––––––––––––––––––––––––––

ತಾತ್ಕಾಲಿಕ ವೇಳಾಪಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.