ಚಿಕ್ಕಮಗಳೂರು: ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏಕೈಕ ವಿದ್ಯಾರ್ಥಿನಿ ದ್ವಿತೀಯ ಪಿಯು ಪರೀಕ್ಷೆ ಬರೆದರು. 14 ಸಿಬ್ಬಂದಿ ಪರೀಕ್ಷಾ ಕಾರ್ಯ ನಿರ್ವಹಿಸಿದರು.
ನಗರದ ಎಂಇಎಸ್ ಕಾಲೇಜಿನ ಜಿ. ನಿವಿತಾ ಅವರು ತಮಿಳು ಭಾಷಾ ವಿಷಯದ ಪರೀಕ್ಷೆ ಬರೆದರು. ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಿತು.
ಪರೀಕ್ಷಾ ಕೇಂದ್ರ ಮುಖ್ಯ ಅಧೀಕ್ಷಕ ಮತ್ತು ಕಾಲೇಜಿನ ಪ್ರಾಚಾರ್ಯ ಎನ್. ಚಂದ್ರಶೇಖರಯ್ಯ ಅವರು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಜಿಲ್ಲೆಯಲ್ಲಿ ಇದೊಂದೇ ಕೇಂದ್ರದಲ್ಲಿ ತಮಿಳು ವಿಷಯ ಪರೀಕ್ಷೆ ಇತ್ತು. ಪರೀಕ್ಷಾರ್ಥಿ ಒಬ್ಬರೇ ಇದ್ದರು. ಕೊಠಡಿ ಮೇಲ್ವಿಚಾರಕ, ಕಚೇರಿ ಮೇಲ್ವಿಚಾರಕ, ಜಾಗೃತ ದಳ, ವಿಚಕ್ಷಣಾ ದಳ, ಪೊಲೀಸರು ಸೇರಿದಂತೆ ಒಟ್ಟು 14 ಸಿಬ್ಬಂದಿ ಪರೀಕ್ಷಾ ಕಾರ್ಯ ನಿರ್ವಹಿಸಿದರು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.