
ಪ್ರಜಾವಾಣಿ ವಾರ್ತೆ
ಉಡುಪಿ: ಧರ್ಮದ ಹೆಸರಿನಲ್ಲಿ ಸಮಾಜಕ್ಕೆ ಉಪಟಳ ನೀಡುತ್ತಿರುವವರನ್ನು ಹತ್ತಿಕ್ಕಬೇಕು. ಇಲ್ಲವಾದರೆ ಹಿಂದೂ ಧರ್ಮಕ್ಕೆ ಅಪಾಯವಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು.
ಧರ್ಮ ಸಂಸತ್ ಸಮ್ಮೇಳನದಲ್ಲಿ ಮಾತನಾಡಿದ ಸ್ವಾಮೀಜಿ ‘ಧರ್ಮದ ನೆಪವಿಟ್ಟುಕೊಂಡು ಗೋರಕ್ಷಣೆ, ಅನೈತಿಕ ಪೊಲೀಸ್ ಗಿರಿ ನಡೆಸುವವರನ್ನು ನಿಯಂತ್ರಿಸಬೇಕು. ಇಂತಹ ಸಮಸ್ಯೆಗಳ ಕುರಿತು ಹಿಂದೂ ಧರ್ಮೀಯರು ಸ್ವಯಂ ಅವಲೋಕನ ಮಾಡಿಕೊಳ್ಳುವ ಅಗತ್ಯವಿದೆ' ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.