ಉಜಿರೆ: ಧರ್ಮಸ್ಥಳದಲ್ಲಿ ಶುಕ್ರವಾರ ಸಂಜೆ ಗೋಧೂಳಿ ಲಗ್ನದಲ್ಲಿ ನಡೆದ 43ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 142 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ಇವರಲ್ಲಿ 11 ಜೋಡಿ ಅಂತರ್ಜಾತಿ ವಿವಾಹ.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಮದುವೆ ಮೋಜಿಗಾಗಿ ಅಲ್ಲ. ಸಾರ್ಥಕ ಬದುಕಿಗಾಗಿ ಎಂದು ಕಿವಿಮಾತು ಹೇಳಿದರು.
ನೂತನ ದಂಪತಿಗಳಿಗೆ ಸಚಿವ ಕೆ. ಅಭಯಚಂದ್ರ ಜೈನ್, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ಕೆ. ವಸಂತ ಬಂಗೇರ ಶುಭ ಹಾರೈಸಿದರು. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಕಣ ಮತ್ತು ಮಂಗಳ ಸೂತ್ರ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.