ADVERTISEMENT

ನಕಲಿ ಮತದಾನ: ಆಯೋಗಕ್ಕೆ ದೂರು

​ಪ್ರಜಾವಾಣಿ ವಾರ್ತೆ
Published 24 ಮೇ 2018, 19:30 IST
Last Updated 24 ಮೇ 2018, 19:30 IST
ಗದಗ ಮತಕ್ಷೇತ್ರದಲ್ಲಿ ಮರು ಮತದಾನ ನಡೆಸುವಂತೆ ಆಗ್ರಹಿಸಿ, ಈ ಕ್ಷೇತ್ರದಲ್ಲಿ ಸೋತಿರುವ ಬಿಜೆಪಿ ಅಭ್ಯರ್ಥಿ ಅನಿಲ್‌ ಮೆಣಸಿನಕಾಯಿ ಅವರು ಗುರುವಾರ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದರು.
ಗದಗ ಮತಕ್ಷೇತ್ರದಲ್ಲಿ ಮರು ಮತದಾನ ನಡೆಸುವಂತೆ ಆಗ್ರಹಿಸಿ, ಈ ಕ್ಷೇತ್ರದಲ್ಲಿ ಸೋತಿರುವ ಬಿಜೆಪಿ ಅಭ್ಯರ್ಥಿ ಅನಿಲ್‌ ಮೆಣಸಿನಕಾಯಿ ಅವರು ಗುರುವಾರ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದರು.   

ಗದಗ: ‘ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ, ನಕಲಿ ಮತಗಳ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಎಚ್‌.ಕೆ ಪಾಟೀಲ ಗೆಲುವು ಗಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಿ, ಮರು ಮತದಾನ ನಡೆಸಬೇಕು’ ಎಂದು, ಅವರ ವಿರುದ್ಧ ಸೋತಿರುವ ಬಿಜೆಪಿ ಅಭ್ಯರ್ಥಿ ಅನಿಲ್‌ ಮೆಣಸಿನಕಾಯಿ ಗುರುವಾರ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದರು.

ಶಾಸಕ ಸಿ.ಟಿ ರವಿ ಮತ್ತು ಸಂಸದ ಶಿವಕುಮಾರ ಉದಾಸಿ ಅವರೊಂದಿಗೆ ಚುನಾವಣಾ ಆಯುಕ್ತರನ್ನು ಭೇಟಿಯಾದ ಅವರು, ‘ಗದಗ ಕ್ಷೇತ್ರದಲ್ಲಿ 10 ಸಾವಿರ ನಕಲಿ ಎಪಿಕ್‌ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಡ್‌ಗಳನ್ನು ಬೂತ್‌ ಮಟ್ಟದ ಚುನಾವಣಾ ಅಧಿಕಾರಿಗಳೇ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿ ಮತ ಚಲಾಯಿಸುವಂತೆ ಮಾಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT