ADVERTISEMENT

ನಟ, ನಿರ್ಮಾಪಕ ಶೃಂಗಾರ್ ನಾಗರಾಜ್

​ಪ್ರಜಾವಾಣಿ ವಾರ್ತೆ
Published 16 ಜುಲೈ 2013, 19:59 IST
Last Updated 16 ಜುಲೈ 2013, 19:59 IST

ಬೆಂಗಳೂರು: `ಶೃಂಗಾರ್ ನಾಗರಾಜ್' ಎಂದೇ ಹೆಸರಾಗಿದ್ದ ನಟ, ನಿರ್ಮಾಪಕ ಗಂಗೊಳ್ಳಿ ರಾಮಶೇಠ್ ನಾಗರಾಜ್ (74) ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟ ರಾಮ್ ಕುಮಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.

ಅವರು ನಿರ್ಮಿಸಿದ್ದ `ಪುಷ್ಪಕ ವಿಮಾನ' ಚಿತ್ರಕ್ಕೆ ರಾಷ್ಟ್ರಪತಿಗಳ ಚಿನ್ನದ ಪದಕ ಲಭಿಸಿತ್ತು. ರಾಜ್ಯೋತ್ಸವ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಅವರಿಗೆ ಸಂದಿದ್ದವು. ಡಾ.ರಾಜ್ ಕುಮಾರ್ ಅವರ ಜತೆ `ಸಿಪಾಯಿ ರಾಮು', `ಬಂಗಾರದ ಮನುಷ್ಯ', `ಹಾಲು ಜೇನು', `ಚಲಿಸುವ ಮೋಡಗಳು', `ಶಬ್ದವೇದಿ' ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದರು.

`ರಂಗ ನಾಯಕಿ', `ಕಥಾ ಸಂಗಮ' ಚಿತ್ರಗಳಲ್ಲಿ ಪೋಷಕ ನಟರಾಗಿ ನಟಿಸಿದ್ದ ಅವರು `ಕೆಸರಿನ ಕಮಲ' ಚಿತ್ರದಲ್ಲಿ ನಟಿ ಕಲ್ಪನಾ ಅವರ ಜತೆ ನಾಯಕ ನಟರಾಗಿ ಪಾತ್ರ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.