
ಪ್ರಜಾವಾಣಿ ವಾರ್ತೆಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪ್ರತಿ ವರ್ಷದಂತೆ ನಡೆಯುವ ಕನ್ನಡ ನಾಡು - ನುಡಿಯ ರಾಷ್ಟ್ರೀಯ ಸಮ್ಮೇಳನ 'ಆಳ್ವಾಸ್ ನುಡಿಸಿರಿ–2015' ನವೆಂಬರ್ 26ರಿಂದ 29ರ ವರೆಗೆ ನಾಲ್ಕು ದಿನಗಳ ಕಾಲ ವಿದ್ಯಾಗಿರಿಯಲ್ಲಿ ನಡೆಯಲಿದೆ.
ಈ ವರ್ಷ ಉದ್ಘಾಟನಾ ಸಮಾರಂಭ ನವೆಂಬರ್ 26ರಂದು ಗುರುವಾರ ಸಂಜೆ ನಡೆಯಲಿದೆ. ಸಮ್ಮೇಳ ನದ ಯಶಸ್ಸಿಗಾಗಿ ಸಿದ್ಧತೆಗಳು ನಡೆಯು ತ್ತಿದ್ದು, ಕನ್ನಡ ಭಾಷೆ ಸಂಸ್ಕೃತಿಯ ಕುರಿತು ಕಾಳಜಿಯಿರುವ ಕನ್ನಡ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ನುಡಿಸಿರಿಯನ್ನು ಯಶಸ್ವಿಗೊಳಿಸ ಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.