ADVERTISEMENT

ನಾಗರಹೊಳೆ ಕಾಡಿಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2012, 19:30 IST
Last Updated 25 ಫೆಬ್ರುವರಿ 2012, 19:30 IST

ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ತಾಲ್ಲೂಕಿನ ಮೇಟಿಕುಪ್ಪೆ ವನ್ಯಜೀವಿ ವಲಯದ ಅರಣ್ಯದಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ.

ಮೇಟಿಕುಪ್ಪೆ ಅರಣ್ಯ ವಲಯದ ಜೋಡಿಕಟ್ಟೆ, ಹೆಬ್ಬಾಳ್ಳ ಕಟ್ಟೆ, ದೇವಮ್ಮನಕಟ್ಟೆ ಮತ್ತು ಇನ್ನಿತರ ಭಾಗದ ಅರಣ್ಯದಲ್ಲಿ ಬೆಂಕಿ ವ್ಯಾಪಿಸಿದ್ದು ಸುಮಾರು ನೂರಕ್ಕೂ ಹೆಚ್ಚು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯದ ಮಧ್ಯಭಾಗದಲ್ಲಿ ಅಲ್ಲಲ್ಲಿ ಬೆಂಕಿ ಹಾಕಲಾಗಿತ್ತು ಎಂದು ತಿಳಿದುಬಂದಿದೆ.
ಬೆಂಕಿಯನ್ನು ನಂದಿಸಲು ಆದಿವಾಸಿಗಳನ್ನು ಬಳಸಿಕೊಂಡು ಪ್ರಯತ್ನಿಸಲಾಯಿತು.

ಅಧಿಕಾರಿಗಳ ನಿರ್ಲಕ್ಷ್ಯ: ಕಾಡಿನಲ್ಲಿ ಬೆಂಕಿಯ ರುದ್ರ ನರ್ತನ ನಡೆಯುತ್ತಿದ್ದರೂ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಾಗಿರಲಿಲ್ಲ. ಡಿಎಫ್‌ಒ ವಿಜಯರಂಜನ್ ಸಿಂಗ್ ಅವರನ್ನು ಸಂಪರ್ಕಿಸಲು ನಡೆಸಿದ ಪ್ರಯತ್ನ ವಿಫಲವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.