ADVERTISEMENT

ನಾಟಕ ಅಕಾಡೆಮಿಗೆ ಸದಸ್ಯರ ನೇಮಕ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 19:30 IST
Last Updated 20 ಏಪ್ರಿಲ್ 2012, 19:30 IST

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಗೆ ಸದಸ್ಯರ ನೇಮಕ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸದಸ್ಯರು: ಉತ್ತರ ಕನ್ನಡ ಜಿಲ್ಲೆಯ ಗಣೇಶ ಯಾಜಿ, ಬಳ್ಳಾರಿಯ ಪ್ರೊ. ಭೀಮಸೇನ್, ಬೆಂಗಳೂರು ಉತ್ತರ ತಾಲ್ಲೂಕಿನ ವಿ. ಗೀತಾ, ಉಡುಪಿಯ ರಾಜೇಂದ್ರ ಕಾರಂತ, ಬೆಳಗಾವಿಯ ಮಲ್ಲನಗೌಡ ಬಸವನಗೌಡ ಪಾಟೀಲ, ಶಿವಮೊಗ್ಗದ ಸಂದೇಶ ಜವಳಿ, ದಕ್ಷಿಣ ಕನ್ನಡ ಜಿಲ್ಲೆಯ ಶೀ.ನಾ. ನಾಡೋಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಎನ್. ಮುನಿರಾಜು ಮತ್ತು ಕರ್ನೂರಿನ ಮೋಹನ ರೈ. ಸದಸ್ಯರ ಅವಧಿ ಮೂರು ವರ್ಷಗಳು ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.