ಬಾಗಲಕೋಟೆ: ನಾನು ಮತ್ತೆ ಈ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬುದು ಜನತೆಯ ಅಪೇಕ್ಷೆಯಾಗಿದೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಅವರು ಮಂಗಳವಾರ ಬೀಳಗಿ ತಾಲ್ಲೂಕಿನ ಗಲಗಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಪಕ್ಷದ ವರಿಷ್ಠರು ಹೇಳಿದಾಗ ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ~ ಎಂದು ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಉದ್ದೇಶದಿಂದ ಮತ್ತು ಪಕ್ಷ ಸಂಘಟನೆಯ ಉದ್ದೇಶದಿಂದ ರಾಜ್ಯದ ಎಲ್ಲ 224 ವಿಧಾನಸಭಾಕ್ಷೇತ್ರದಲ್ಲಿ ತಾವು ಪ್ರವಾಸ ಮಾಡುವುದಾಗಿ ಹೇಳಿದರು.
ನೆಮ್ಮದಿ ಇರಲಿಲ್ಲ: ಬಳಿಕ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿಯಾಗಿ ಒಂದು ದಿನ ಕೂಡ ನೆಮ್ಮದಿಯಿಂದ ಇರಲಿಲ್ಲ, ನಮ್ಮ ಪಕ್ಷದವರೇ ಕಿರುಕುಳ ಕೊಟ್ಟರು ಯಾವುದಕ್ಕೂ ಬೆದರಿಲ್ಲ, ಜನಪರ ಕೆಲಸ ಮಾಡಿದ್ದೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.