ಬೆಂಗಳೂರು: 2014ರ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಲಾದ ಬೆನ್ನಲ್ಲೆ ವಿವಿಧ ಪಕ್ಷಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಿಜೆಪಿ ಅಭ್ಯರ್ಥಿಗಳಾದ ಅನಂತ್ ಕುಮಾರ್ ಹಾಗೂ ಪಿ.ಸಿ.ಮೋಹನ್ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅನಂತ್‌ಕುಮಾರ್ ಅವರು ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಮುಖಂಡ ಆರ್. ಅಶೋಕ್ ಸೇರಿದಂತೆ ಪಕ್ಷದ ಹಲವು ನಾಯಕರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.
ಇತ್ತ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪಿ.ಸಿ. ಮೋಹನ್ ಅವರು ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.