
ಧಾರವಾಡ: ‘ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ಗೋಮಾಳ ಭೂಮಿಯನ್ನು ಸಚಿವ ದಿನೇಶ್ ಗುಂಡೂರಾವ್ ಹಾಗೂ ಕುಟುಂಬದವರು ಕಬಳಿಸಿದ್ದಾರೆ’ ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್.ಹಿರೇಮಠ ಮಾಡಿರುವ ಆರೋಪಕ್ಕೆ ಇದೇ ಮೊದಲ ಬಾರಿಗೆ ತೀಕ್ಷ್ಮ್ಣ ಪ್ರತಿಕ್ರಿಯೆ ನೀಡಿರುವ
ಆಹಾರ ಸಚಿವ ದಿನೇಶ್ ಗುಂಡೂರಾವ್, ‘ಹಿರೇಮಠ ಅವರು ವೃಥಾ ಆರೋಪ ಮಾಡುತ್ತಿದ್ದಾರೆ. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ’ ಎಂದಿದ್ದಾರೆ.
ಮಂಗಳವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಹಿರೇಮಠ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದನ್ನೇ ಹೇಳುತ್ತಾರೆ. ಅವರ ಬಳಿ ನಮ್ಮ ಕುಟುಂಬದ ಭೂ ಅಕ್ರಮದ ಬಗ್ಗೆ ದಾಖಲೆಗಳಿದ್ದರೆ ಅದನ್ನು ಕೋರ್ಟ್‌ಗೆ ಸಲ್ಲಿಸಲಿ. ಅದನ್ನು ಬಿಟ್ಟು ನನ್ನ ತೇಜೋವಧೆ ಮಾಡುವುದು ಸರಿಯಲ್ಲ. ಅವರು ವ್ಯಕ್ತಿ ಕೇಂದ್ರಿತವಾಗಿ ತೇಜೋವಧೆ ಮಾಡುತ್ತಿದ್ದಾರೆ. ನಮ್ಮ ಕುಟುಂಬದ ಒಟ್ಟು ಜಮೀನಿನ ಬಗ್ಗೆಯೂ ಅವರಿಗೆ ಸರಿಯಾದ
ಮಾಹಿತಿ ಇಲ್ಲ.
ಮೊದಲು 10 ಎಕರೆ ಭೂಮಿ ಕಬಳಿಸಲಾಗಿದೆ ಎಂದರು. ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ 64 ಎಕರೆ ಕಬಳಿಕೆಯಾಗಿದೆ ಎಂದಿದ್ದಾರೆ. ಮೊದಲು ಸರಿಯಾದ ಮಾಹಿತಿ ಪಡೆದು ಬಳಿಕ ಮಾಧ್ಯಮಗಳ ಮುಂದೆ ಬರಲಿ’ ಎಂದು ಅವರು ಸವಾಲು ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.