ಬೆಂಗಳೂರು: ಕೆಐಎಡಿಬಿ ಭೂ ಹಗರಣದ ಪ್ರಮುಖ ಆರೋಪಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಜಾಮೀನು ಅರ್ಜಿಯನ್ನು `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ~ ಸೋಮವಾರ ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 26 ರವರೆಗೆ ಮುಂದುವರೆಸಿ ಸೋಮವಾರ ಆದೇಶ ಹೊರಡಿಸಿದೆ.
ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿ ಸೆ. 19ಕ್ಕೆ ಮುಕ್ತಾಯವಾಗಿತ್ತು. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅ. 26ರ ವರೆಗೆ ವಿಸ್ತರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.