ADVERTISEMENT

ನಾಲಿಗೆ ಹೊರಳುತ್ತಿದೆ: ಸ್ವಾಮೀಜಿ ಟೀಕೆ

​ಪ್ರಜಾವಾಣಿ ವಾರ್ತೆ
Published 23 ಮೇ 2018, 18:46 IST
Last Updated 23 ಮೇ 2018, 18:46 IST
ಪಂಡಿತಾರಾಧ್ಯ ಶಿವಾಚಾರ್ಯ
ಪಂಡಿತಾರಾಧ್ಯ ಶಿವಾಚಾರ್ಯ   

ಚಿತ್ರದುರ್ಗ: ‘ರೈತರ ಸಾಲ ಮನ್ನಾ ಮಾಡುವುದಾಗಿ ಎಚ್‌.ಡಿ.ಕುಮಾರಸ್ವಾಮಿ ಚುನಾವಣಾ ಪೂರ್ವದಲ್ಲೇ ಭರವಸೆ ನೀಡಿದ್ದರು. ಈಗ ಅವರ ನಾಲಿಗೆ ಹೊರಳುತ್ತಿದೆ. ರಾಜಕೀಯ ನಾಟಕ ಹೇಗಿದೆ ಎಂಬುದನ್ನು ಇದು ತೋರಿಸುತ್ತಿದೆ. ಹೀಗಾಗಿ, ರಾಜ್ಯದ ಜನರಿಗೆ ಭವಿಷ್ಯವಿಲ್ಲ’ ಎಂದು ತರಳಬಾಳು ಶಾಖಾಮಠದ ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೇ ಪಕ್ಷಕ್ಕೆ ಬಹುಮತ ಸಿಕ್ಕಿದ್ದರೆ ಕುದುರೆ ವ್ಯಾಪಾರ ನಡೆಯುತ್ತಿರಲಿಲ್ಲ. ಪಕ್ಷಗಳ ನಡುವೆ ಅನೈತಿಕ ಸಂಬಂಧವೂ ಬೆಳೆಯುತ್ತಿರಲಿಲ್ಲ. ಈ ಅತಂತ್ರ ಸರ್ಕಾರ ರಚನೆಯಾಗಲು ಮತದಾರರೇ ಕಾರಣ. ಮುಂದಿನ ಚುನಾವಣೆಯಲ್ಲಾದರೂ ಒಂದು ಪಕ್ಷಕ್ಕೆ ಬಹುಮತ ನೀಡಿ’ ಎಂದು ಹೇಳಿದರು.

‘ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಲಿಂಗಾಯತ ವೀರಶೈವ ಸಮುದಾಯಕ್ಕೆ ಈ ಹುದ್ದೆ ಕೇಳುವುದರಲ್ಲಿ ಅರ್ಥವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

‘ಉಪ ಮುಖ್ಯಮಂತ್ರಿ ಸ್ಥಾನ ಉನ್ನತವಾದುದು ಎಂಬ ನಂಬಿಕೆ ಜನಸಾಮಾನ್ಯರಲ್ಲಿದೆ. ಆದರೆ, ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸ್ಥಾನಗಳಿಗೆ ಮಾತ್ರ ಸಾಂವಿಧಾನಿಕ ಮಾನ್ಯತೆ ಇದೆ’ ಎಂ‌ದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.