ADVERTISEMENT

ನಾಳೆಯಿಂದ ಹಾಲಿನ ದರ ರೂ. 3 ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 5 ಜನವರಿ 2012, 19:30 IST
Last Updated 5 ಜನವರಿ 2012, 19:30 IST

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಸಾಮಾನ್ಯ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಮೂರು ರೂಪಾಯಿ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ.

ಪ್ರತಿ ಲೀಟರ್ ಹಾಲಿಗೆ ಐದು ರೂಪಾಯಿ ಹೆಚ್ಚಿ ಸಲು ಕೆಎಂಎಫ್ ಕೋರಿಕೆ ಸಲ್ಲಿಸಿತ್ತು. ಇದು ದುಬಾರಿಯಾಗುತ್ತದೆ ಎಂಬ ಕಾರಣಕ್ಕೆ ಆ ಪ್ರಸ್ತಾವವನ್ನು ಸರ್ಕಾರ ತಿರಸ್ಕರಿಸಿ, ಮೂರು ರೂಪಾಯಿ ಹೆಚ್ಚಿಸಲು ಅನುಮತಿ ನೀಡಿದೆ.
ಸಾಮಾನ್ಯ ಹಾಲಿನ ದರ ಮೂರು ರೂಪಾಯಿ ಹೆಚ್ಚಾದರೆ, ಇತರ ವಿಶೇಷ ಬಗೆಯ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3.5 ರಿಂದ 4 ರೂಪಾಯಿ ಹೆಚ್ಚಿಸಲು ನಿರ್ಧರಿಸಲಾಗಿದೆ.

ಈ ಕುರಿತು ಶುಕ್ರವಾರ ಔಪಚಾರಿಕ ಸಭೆ ನಡೆಯಲಿದ್ದು, ಶನಿವಾರದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಸಹಕಾರ ಇಲಾಖೆ ಮೂಲಗಳು ತಿಳಿಸಿವೆ. ರೈತರಿಂದ ಪಡೆಯುವ ಪ್ರತಿ ಲೀಟರ್ ಹಾಲಿನ ದರವನ್ನು 2.5 ರೂಪಾಯಿ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.