ADVERTISEMENT

ನಿಗಮ–ಮಂಡಳಿ: ನಾಳೆ ನಿರ್ಧಾರ?

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 19:30 IST
Last Updated 12 ಡಿಸೆಂಬರ್ 2013, 19:30 IST

ಬೆಂಗಳೂರು: ಲೋಕಸಭಾ ಚುನಾ­ವಣೆ­ಗೆ ಮೊದಲೇ ನಿಗಮ – ಮಂಡಳಿ­ಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇದ್ದು, ಶನಿವಾರ ನಡೆಯುವ ಕೆಪಿಸಿಸಿ ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ 5 ಸಾವಿರ­ಕ್ಕೂ ಅಧಿಕ ಆಕಾಂಕ್ಷಿಗಳು ಈಗಾ­ಗಲೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಮುಖ್ಯಮಂತ್ರಿ ಅವರಿಗೆ ಮನವಿ ನೀಡಿದ್ದಾರೆ.

ಸಮನ್ವಯ ಸಮಿತಿ ಸಭೆಯಲ್ಲಿ ಅವು­ಗಳನ್ನೆಲ್ಲ ಪರಿಶೀಲಿಸಿ ಮೊದಲ ಹಂತದಲ್ಲಿ 20ರಿಂದ 25 ಜನ ಶಾಸಕ­ರು,  ಕಾರ್ಯಕರ್ತರನ್ನು ನೇಮಕ ಮಾಡ­ಲಾಗುತ್ತದೆ ಎಂದು ಗೊತ್ತಾಗಿದೆ.

ಒಂದೇ ಹಂತದಲ್ಲಿ ನೇಮಕ ಮಾಡಿದರೆ ಅವಕಾಶ ಸಿಗದವರು ಅಸಮಾಧಾನಗೊಳ್ಳಬಹುದು ಎಂಬ ಕಾರಣಕ್ಕೆ ಎರಡು ಹಂತಗಳಲ್ಲಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಸಮಿತಿಗಳಿಗೆ ಮೊದಲ ಹಂತದಲ್ಲಿ ನೇಮಕ ಮಾಡ­ಲಾಗುತ್ತದೆ. ಅಲ್ಲಿ ಅವಕಾಶ ಸಿಗ­ದವರಿಗೆ, ಪಕ್ಷಕ್ಕಾಗಿ ಹಲವು ವರ್ಷ­ಗಳಿಂದ ದುಡಿಯುತ್ತಿರುವ ಕಾರ್ಯ­ಕರ್ತ­ರಿಗೆ ರಾಜ್ಯಮಟ್ಟದಲ್ಲಿ ನೇಮಕಕ್ಕೆ  ಆದ್ಯತೆ ನೀಡಲಾಗುತ್ತದೆ ಎಂದು ಮುಖಂಡರೊಬ್ಬರು ತಿಳಿಸಿದರು.

ಅಭ್ಯರ್ಥಿಗಳ ಪಟ್ಟಿ: ರಾಜ್ಯ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ಸಮ್ಮುಖದಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಶನಿವಾರ ನಡೆಯಲಿದ್ದು, ಲೋಕಸಭಾ ಚುನಾವಣೆಗೆ ಸಂಭವ­ನೀಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.