ADVERTISEMENT

ನಿಗಮ, ಮಂಡಳಿ ಅಧ್ಯಕ್ಷರಿಗೆ 8.56 ಕೋಟಿ ಭತ್ಯೆ ಪಾವತಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 19:40 IST
Last Updated 4 ಡಿಸೆಂಬರ್ 2012, 19:40 IST

ಬೆಳಗಾವಿ: ರಾಜ್ಯದ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಪ್ರಸಕ್ತ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಒಟ್ಟು ರೂ 8.56 ಕೋಟಿ  ವೇತನ-ಭತ್ಯೆ ಪಾವತಿಸಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎಂ.ಸಿ. ಅಶ್ವಥ್ ಅವರು ಕೇವಲ 2 ವರ್ಷಗಳ ಅವಧಿಯಲ್ಲಿ ರೂ 84.39 ಲಕ್ಷ ಭತ್ಯೆ ಪಡೆದು ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕ ಸಾಬೂನು ಕಾರ್ಖಾನೆ ಅಧ್ಯಕ್ಷ ಶಿವಾನಂದ ನಾಯಕ ರೂ 84.13 ಲಕ್ಷ, ರಾಜ್ಯ ಕರಕುಶಲ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಲಲಿತಾ ರಾಣಿ ಶ್ರೀರಂಗದೇವರಾಯಲು ಅವರಿಗೆ ರೂ 51.01 ಲಕ್ಷ ಪಾವತಿಯಾಗಿದೆ. ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಶಂಕರಗೌಡ ಹರವಿ ಅವರು ರೂ 38.21 ಲಕ್ಷ ಪಡೆದುಕೊಂಡಿದ್ದಾರೆ ಎಂಬುದು ಮೂಡಲಗಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಮಾಹಿತಿ ಹಕ್ಕಿನಡಿ ಪಡೆದುಕೊಂಡಿ ಮಾಹಿತಿಯಿಂದ ಬಹಿರಂಗಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT