
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜ್ಯದಲ್ಲಿನ ಭೀಕರ ಬರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ತಮ್ಮ ಮೂರು ತಿಂಗಳ ವೇತನ ನೀಡುವುದಾಗಿ ಮೂರು ನಿಗಮ- ಮಂಡಳಿಗಳ ಅಧ್ಯಕ್ಷರು ತಿಳಿಸಿದ್ದಾರೆ.
ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಮಾರ್ಕೆಟಿಂಗ್ ಕನ್ಸಲ್‌ಟೆಂಟ್ ಏಜೆನ್ಸಿ ಅಧ್ಯಕ್ಷ ಮರಿಸ್ವಾಮಿ, ಕಂಠೀರವ ಸ್ಟುಡಿಯೊ ಅಧ್ಯಕ್ಷ ರುದ್ರೇಶ ಅವರು ಮೂರು ತಿಂಗಳ ವೇತನ ನೀಡುವುದಾಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.