ADVERTISEMENT

ನಿರಾಣಿ ಅರ್ಜಿ ಕಾಯ್ದಿಟ್ಟ ಆದೇಶ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 19:59 IST
Last Updated 5 ಏಪ್ರಿಲ್ 2013, 19:59 IST

ಬೆಂಗಳೂರು: ಉದ್ಯಮಿ ಆಲಂ ಪಾಷಾ ಅವರು ತಮ್ಮ ವಿರುದ್ಧ ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರು ರದ್ದು ಮಾಡಬೇಕು ಎಂದು ಕೋರಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

ತಮಗೆ ಮಂಜೂರಾದ ಭೂಮಿಯನ್ನು ನಕಲಿ ಸಹಿ ಬಳಸಿ ನಿರಾಣಿ ಪಡೆದುಕೊಂಡಿದ್ದಾರೆ ಎಂದು ದೂರಿ ಪಾಷಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಪಾಷಾ ಸಲ್ಲಿಸಿದ್ದ ದೂರು ಆಧರಿಸಿ, ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು. ದೂರಿನಲ್ಲಿ ಹೇಳಿದಂತೆ, ನಿರಾಣಿ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ಗೆ ಮೊರೆ: ಹೆಸರಘಟ್ಟ ಹೋಬಳಿಯ ಮಾದಪ್ಪನಹಳ್ಳಿಯ 32.04 ಎಕರೆ ಸರ್ಕಾರಿ ಜಮೀನು ಕಬಳಿಸಿರುವ ಸಂಚಿನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಯಲಹಂಕದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಅವರ ಕೋರಿಕೆ ತಿರಸ್ಕೃತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.