ADVERTISEMENT

ನೀಟ್‌: ವಿಜಯಪುರದ ಶ್ರೀಧರ್‌ ರಾಜ್ಯಕ್ಕೆ ಪ್ರಥಮ

ರಾಜ್ಯದ ಶೇ 67ರಷ್ಟು ಮಂದಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 19:30 IST
Last Updated 4 ಜೂನ್ 2018, 19:30 IST
ಶ್ರೀಧರ ದೊಡ್ಡಮನಿ
ಶ್ರೀಧರ ದೊಡ್ಡಮನಿ   

ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್‌) ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ವಿಜಯಪುರದ ಶ್ರೀಧರ್‌ ದೊಡ್ಡಮನಿ ಅಖಿಲ ಭಾರತ ಮಟ್ಟದಲ್ಲಿ 105ನೇ ರ‍್ಯಾಂಕ್‌ ಪಡೆದು ರಾಜ್ಯಕ್ಕೆ ಮೊದಲಿಗ ಎಂಬ ಕಿರೀಟ ಧರಿಸಿದ್ದಾರೆ.

107ನೇ ರ‍್ಯಾಂಕ್‌ ಪಡೆದ ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ಕಾಮತ್‌ ಎರಡನೇ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಮಹಿಮಾ ಕೃಷ್ಣ 209ನೇ ರ‍್ಯಾಂಕ್‌ ಗಳಿಸಿದ್ದಾರೆ. ಮೇ 6ರಂದು 136 ನಗರಗಳ 2,255 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ರಾಜ್ಯದ ಶೇ 67.02 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.

ರಾಜ್ಯದಿಂದ 94,808 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 85,288 ಮಂದಿ ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 54,163 ಮಂದಿ ಮಾತ್ರ ಆಯ್ಕೆಯಾಗಿದ್ದಾರೆ. 818 ಮಂದಿ ಕನ್ನಡದಲ್ಲಿ ಪರೀಕ್ಷೆ ಬರೆದಿದ್ದು, ಇದರಲ್ಲಿ ಶೇ 2.06ರಷ್ಟು ಮಂದಿ ಅರ್ಹತೆ ಪಡೆದಿದ್ದಾರೆ. ಒಟ್ಟು 11 ಭಾಷೆಗಳಲ್ಲಿ ಪರೀಕ್ಷೆ ನಡೆದಿದೆ. ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ವರ್ಷ ಶೇ 16.49ರಷ್ಟು ವಿದ್ಯಾರ್ಥಿಗಳು ಹೆಚ್ಚಾಗಿದ್ದಾರೆ.

ADVERTISEMENT

ಕಟ್‌ಆಫ್‌ ಅಂಕ ಇಳಿಕೆ: ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಕಟ್‌ಆಫ್‌ ಅಂಕ ಇಳಿಕೆಯಾಗಿದೆ.

ಸಾಮಾನ್ಯ ವಿಭಾಗದಲ್ಲಿ 119ರಿಂದ 691 ಅಂಕಗಳಿಗೆ ನಿಂತಿದೆ. ಒಬಿಸಿ 118ರಿಂದ 96, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟವರ್ಗದಲ್ಲಿ 118ರಿಂದ 96ರವರೆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.