ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಶಿವರಾಜ ಸಜ್ಜನರ ಬಂಧನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2017, 19:30 IST
Last Updated 3 ಜುಲೈ 2017, 19:30 IST
ನೀತಿ ಸಂಹಿತೆ ಉಲ್ಲಂಘನೆ ಶಿವರಾಜ ಸಜ್ಜನರ ಬಂಧನ
ನೀತಿ ಸಂಹಿತೆ ಉಲ್ಲಂಘನೆ ಶಿವರಾಜ ಸಜ್ಜನರ ಬಂಧನ   

ಹಾವೇರಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಕೋರ್ಟ್ ವಾರಂಟ್ ನಿರ್ಲಕ್ಷಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ ಅವರನ್ನು ಸೋಮವಾರ ಬಂಧಿಸಲಾಗಿದೆ.

2013ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚುನಾವಣಾ ಆಯೋಗವು ಶಿವರಾಜ ಸಜ್ಜನರ ವಿರುದ್ಧ ದೂರು ದಾಖಲಿಸಿತ್ತು. ಆದರೆ, ಈ ಪ್ರಕರಣದ ವಿಚಾರಣೆಗಳಿಗೆ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.

ವಾರಂಟ್ ಜಾರಿಯನ್ನು ಹಿಂಪಡೆಯುವಂತೆ ಕೋರಿ ಸೋಮವಾರ ನ್ಯಾಯಾಲಯಕ್ಕೆ ಹಾಜರಾದ ಅವರಿಗೆ  ಜುಲೈ 10ರ ತನಕ ನ್ಯಾಯಾಂಗ ಬಂಧನಕ್ಕೆ ನೀಡುವಂತೆ  ನ್ಯಾಯಾಧೀಶ ಎನ್‌. ಸುನೀಲ್ ಕುಮಾರ್‌ ಸಿಂಗ್ ಆದೇಶಿಸಿದರು. ಅನಾರೋಗ್ಯ ಕಾರಣ ಸಜ್ಜನರ ಅವರನ್ನು ರಾತ್ರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.