
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗದ ರೈತರು ನಗರದ ಮೇಖ್ರಿ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನಕ್ಕೆ ಆಗಮಿಸುತ್ತಿದ್ದ ರೈತರನ್ನು ಮೇಖ್ರಿ ವೃತ್ತದಲ್ಲಿ ಪೊಲೀಸರು ತಡೆದ ಪರಿಣಾಮ ಅಲ್ಲಿಯೇ ಪ್ರತಿಭಟನೆ ಆರಂಭಿಸಿದ್ದಾರೆ.
ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.