ಶಿವಮೊಗ್ಗ: ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತಾಗಿ ನೂರು ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಶಿಕಾರಿಪುರ ತಾಲ್ಲೂಕು ಶಿವನಪಾದದಲ್ಲಿ ಸೋಮವಾರ ನಡೆದ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕೆಲವೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ನಿವಾರಣೆಗೆ ಸಮರೋಪಾದಿಯಲ್ಲಿ ಬೋರ್‌ವೆಲ್ ದುರಸ್ತಿ, ಪೈಪ್‌ಲೈನ್ ಅಳವಡಿಸುವುದು, ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಜಿಲ್ಲಾ ಪಂಚಾಯ್ತಿಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದರು. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುದಾನದ ಕೊರತೆ ಇಲ್ಲ. ಸರ್ಕಾರದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ತೆರಿಗೆ ಸಂಗ್ರಹಣೆಯಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಅಭಿವೃದ್ಧಿಯಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.