ADVERTISEMENT

ನೀರು ನಿಲುಗಡೆ ಭರವಸೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2012, 21:01 IST
Last Updated 10 ಡಿಸೆಂಬರ್ 2012, 21:01 IST

ಕೃಷ್ಣರಾಜಸಾಗರ (ಮಂಡ್ಯ): ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ನಂತರ ನೀರು ನಿಲ್ಲಿಸಲಾಗುವುದು ಎಂದು ಸರ್ಕಾರದ ಪರವಾಗಿ ಜಿಲ್ಲಾಡಳಿತ ಭರವಸೆ ನೀಡಿದೆ. ಆದ್ದರಿಂದ, ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರು ಆಮರಣ ಉಪವಾಸ ಸತ್ಯಾಗ್ರಹ ಹಿಂತೆಗೆದುಕೊಂಡಿದ್ದಾರೆ ಎಂದು ರೈತ ಸಂಘದ ಗೌರವಾಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದರು.

`ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಇಂದಿನ ಮಟ್ಟಿಗೆ ವಾಪಸ್ ಪಡೆದುಕೊಂಡಿದ್ದೇವೆ. ಇಂದಿಗೆ 32 ಸಾವಿರ ಕ್ಯೂಸೆಕ್  ನೀರು ತಮಿಳುನಾಡಿಗೆ ಹರಿದು ಹೋಗಿದೆ. 50 ಸಾವಿರ ಕ್ಯೂಸೆಕ್ ನೀರು ಹರಿಸಿದ ಮೇಲೆ ನೀರನ್ನು ನಿಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.