ADVERTISEMENT

ನುಡಿ 5.0 ಆವೃತ್ತಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2013, 19:59 IST
Last Updated 30 ಜನವರಿ 2013, 19:59 IST

ಬೆಂಗಳೂರು: ಕನ್ನಡ ಗಣಕ ಪರಿಷತ್ತು ಅಭಿವೃದ್ಧಿಪಡಿಸಿರುವ `ನುಡಿ' ತಂತ್ರಾಂಶದ ಐದನೆಯ ಆವೃತ್ತಿಯನ್ನು (5.0) ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ವಿಧಾನಸೌಧಲ್ಲಿ ಮಂಗಳವಾರ ಬಿಡುಗಡೆ ಮಾಡಿದರು. ಈ ತಂತ್ರಾಂಶ ಗಣಕ ಪರಿಷತ್ತಿನ ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲಭ್ಯವಿದೆ.

ನುಡಿ ತಂತ್ರಾಂಶ ಬಳಸಿ ಟೈಪ್ ಮಾಡಿರುವ ಮಾಹಿತಿಯನ್ನು ಯೂನಿಕೋಡ್‌ಗೆ ಪರಿವರ್ತಿಸಲು ಅದರಲ್ಲಿ ಅವಕಾಶ ಕಲ್ಪಿಸಲಾಗಿದೆ. ಹೊಸ ಯೂನಿಕೋಡ್ ಫಾಂಟ್‌ಗಳನ್ನೂ ತಂತ್ರಾಂಶದ ಜೊತೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.