ADVERTISEMENT

‘ನೋಟು ಎಲ್ಲಿ ಹೋಗುತ್ತಿವೆ’

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST
‘ನೋಟು ಎಲ್ಲಿ ಹೋಗುತ್ತಿವೆ’
‘ನೋಟು ಎಲ್ಲಿ ಹೋಗುತ್ತಿವೆ’   

ಕಲಬುರ್ಗಿ: ‘ದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚೇ ನಗದು ಇದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳುತ್ತಾರೆ. ಆದರೆ, ಆ ಎಲ್ಲ ನೋಟುಗಳು ಎಲ್ಲಿ ಹೋಗುತ್ತಿವೆ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಬ್ಯಾಂಕ್, ಎಟಿಎಂಗಳಲ್ಲಿ ಹಣವೇ ಸಿಗುತ್ತಿಲ್ಲ. ನೋಟು ರದ್ದತಿಯಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ’ ಎಂದು ಆರೋಪಿಸಿದರು.

ಜಾದೂ ನಡೆಯಲ್ಲ: ‘ರಾಜ್ಯದಲ್ಲಿ ಅಮಿತ್ ಶಾ ಜಾದೂ ನಡೆಯುವುದಿಲ್ಲ. ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿಯವರ ಕಾಂಗ್ರೆಸ್ ಮುಕ್ತ ಭಾರತ ಆಶಯಕ್ಕೆ ಕರ್ನಾಟಕದಿಂದಲೇ ತಡೆವೊಡ್ಡಲು ರಣತಂತ್ರ ರೂಪಿಸಿದ್ದೇವೆ. ಹೀಗಾಗಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.