ADVERTISEMENT

ನೌಕರರಿಗೆ ತುಟ್ಟಿಭತ್ಯೆ

​ಪ್ರಜಾವಾಣಿ ವಾರ್ತೆ
Published 15 ಮೇ 2012, 19:30 IST
Last Updated 15 ಮೇ 2012, 19:30 IST

ಬೆಂಗಳೂರು: ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 69.5ರಿಂದ 76.75ಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಜನವರಿ ಒಂದರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ.

ನೌಕರರ ವೇತನ ಪರಿಷ್ಕರಣೆಯಾಗಿರುವ ಹಿನ್ನೆಲೆಯಲ್ಲಿ ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಶೇ 76.75ರಷ್ಟು ತುಟ್ಟಿ ಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಲಾಗಿದೆ ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. 

ಜನವರಿಯಿಂದ ಮಾರ್ಚ್‌ವರೆಗಿನ ಭತ್ಯೆಯನ್ನು ನಗದು ರೂಪದಲ್ಲಿ ನೀಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.