ADVERTISEMENT

ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST

ನವದೆಹಲಿ: ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವಂತೆ ಆಗ್ರಹಿಸಿ ಬೆಂಗಳೂರು ವಕೀಲರ ಸಂಘ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಬುಧವಾರ ಮನವಿ ಸಲ್ಲಿಸಿದೆ.

ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಹಾಗೂ ಅಡ್ವೊಕೇಟ್‌ ಜನರಲ್ ಎಂ.ಆರ್‌.ನಾಯಕ್ ನೇತೃತ್ವದ ನಿಯೋಗವು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದೆ.

ರಾಜ್ಯ ಹೈಕೋರ್ಟ್‌ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿವೆ. ಪ್ರಸ್ತುತ 29 ನ್ಯಾಯ ಮೂರ್ತಿಗಳು ಮಾತ್ರ ಕಾರ್ಯ ಸಲ್ಲಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.