
ಪ್ರಜಾವಾಣಿ ವಾರ್ತೆಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಆಪ್ತ ಸಹಾಯಕ ಮೆಹಫೂಜ್ ಅಲಿಖಾನ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಮೇ 10ರವರೆಗೆ ವಿಸ್ತರಿಸಿದೆ.
ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಸಿಬಿಐ ಅಧಿಕಾರಿಗಳು ಮಾಡಿದ ಮನವಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ. ಅಂಗಡಿ ಅವರು ಪುರಸ್ಕರಿಸಿ ಆದೇಶ ನೀಡಿದರು. ಜಾಮೀನು ಕೋರಿ ರೆಡ್ಡಿ ಮತ್ತು ಅಲಿಖಾನ್ ಅವರು ಸಲ್ಲಿಸಿದ್ದ ಅರ್ಜಿಯ ಮನವಿ ಕುರಿತ ವಿಚಾರಣೆಯನ್ನೂ ನ್ಯಾಯಾಧೀಶರು ಮೇ 10ಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.