
ಪ್ರಜಾವಾಣಿ ವಾರ್ತೆಬೆಂಗಳೂರು: ಇದೇ 10ರಂದು 9 ಗ್ರಾಮ ಪಂಚಾಯಿತಿಗಳು, ಎರಡು ಜಿಲ್ಲಾ ಪಂಚಾಯಿತಿ ಮತ್ತು 12 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳು ಹಾಗೂ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಆ ದಿನ ಸ್ಥಳೀಯವಾಗಿ ರಜೆ ಘೋಷಿಸಲಾಗಿದೆ.
ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಕಾರ್ಖಾನೆಗಳು, ಶಾಲಾ- ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕ್‌ಗಳು, ಜೀವವಿಮಾ ನಿಗಮ ಇತ್ಯಾದಿಗಳಿಗೂ ರಜೆ ಅನ್ವಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.