ADVERTISEMENT

ಪಂಡರಾಪುರಕ್ಕೆ ಹೊರಟವರ ಮೇಲೆ ಬಸ್ ಹರಿದು ಏಳು ಸಾವು

​ಪ್ರಜಾವಾಣಿ ವಾರ್ತೆ
Published 17 ಜೂನ್ 2012, 9:35 IST
Last Updated 17 ಜೂನ್ 2012, 9:35 IST

ಬೆಳಗಾವಿ: ಪಂಡರಾಪುರಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದವರ ಮೇಲೆ ಸಾರಿಗೆ ಸಂಸ್ಥೆಯ ಬಸ್ಸೊಂದು ಹರಿದು ಏಳು ಜನ ಸ್ಥಳದಲ್ಲೇ ಮೃತಪಟ್ಟು, ಮೂರು ಜನ ಗಾಯಗೊಂಡ ಘಟನೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಸುತ್ತಗಟ್ಟಿ ಎಂಬಲ್ಲಿ ಜರುಗಿದೆ.

ಬೆಳಗಾವಿ ತಾಲ್ಲೂಕಿನ ನೀಲ್ಜಿ ಗ್ರಾಮದವರಾದ ಇವರು ದಾರಿ ಮಧ್ಯೆ ದಣಿವು ಆರಿಸಿಕೊಳ್ಳಲು ರಸ್ತೆ ಬದಿಯಲ್ಲಿ ಕುಳಿತಿದ್ದರು. ಆಗ ವೇಗವಾಗಿ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಇವರ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ.

ಘಟನೆ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಬೆಳಗಾವಿಯ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರಲ್ಲಿ ಒಬ್ಬರ ಸ್ಥಿತಿ ತೀರಾ ಚಿಂತಾಜನಕವಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.